ಏ 15 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು,ಏ.14, 2023: ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಇದೇ ಏ.15ರಿಂದ 19ರವರೆಗೆ ಜಿಲ್ಲೆಯ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಏ.15ರಂದು ಪುತ್ತೂರು ತಾಲೂಕಿನ ಪಾಣಾಜೆ, ಏ.18ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲಾ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಏ.19ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ.
ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.