ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮೇ.17 ರಿಂದ ಮೂಲ ದಾಖಲೆಗಳ ಪರಿಶೀಲನೆ

 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮೇ.17 ರಿಂದ ಮೂಲ ದಾಖಲೆಗಳ ಪರಿಶೀಲನೆ
Share this post

ಮಂಗಳೂರು,ಮೇ.15, 2023: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆಗಾಗಿ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳನ್ನು ಇದೇ ಮೇ. 17 ರಿಂದ 19 ರವರೆಗೆ ಸ್ವೀಕರಿಸಲಾಗುವುದು.

ಮೇ.17 ರಂದು ಸಮಾಜ ವಿಜ್ಞಾನ, 18 ರಂದು ಗಣಿತ ವಿಜ್ಞಾನ, 19 ರಂದು ಆಂಗ್ಲ ಹಾಗೂ ಜೀವಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆಯು ಬೆಳಗ್ಗೆ 10 ಗಂಟೆಗೆ ನಗರದ ಲೇಡಿಹಿಲ್  ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಎಲ್ಲಾ ಪ್ರಮಾಣ ಪತ್ರಗಳ ದೃಡೀಕೃತ ಪ್ರತಿಯನ್ನು ದ್ವಿಪ್ರತಿಯಲ್ಲಿ ತರುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!