ಮೇ.31 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ
ಮಂಗಳೂರು,ಮೇ.26, 2023: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಡಾ. ಪಿ. ದಯಾನಂದ ಪೈ, ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಇಂಡಿಯನ್ ಕಾನ್ಸರ್ ಸೋಸೈಟಿ ಹಾಗೂ ಟೊಬ್ಯಾಕೋ ಸೆಸೆಷನ್ ಸೆಂಟರ್ (ಯೆನೆಪೋಯಾ) ಇವರ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಮೇ.31ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ನಗರದ ಡಾ. ಪಿ. ದಯಾನಂದ ಪೈ, ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಉದ್ಘಾಟಿಸುವರು.
ಡಾ. ಪಿ. ದಯಾನಂದ ಪೈ, ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಮ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ನಗರದ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ, ಮಹಾನಗರಪಾಲಿಕೆಯ ಆಯುಕ್ತರಾದ ಚೆನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಎಂ., ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ. ಸದಾಶಿವ ಶ್ಯಾನುಭೋಗ್, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಭಾಗವಹಿಸುವರು.
ಯೆನಪೋಯ ಡೆಂಟಲ್ ಕಾಲೇಜಿನ ಒರಲ್ ಮೆಡಿಸಿನ್ ಹಾಗೂ ರೇಡಿಯೋಲಜಿ ವಿಭಾಗದ ಅಡಿಶನಲ್ ಪ್ರೊಫೆಸರ್ ಡಾ. ರಚನಾ ಪ್ರಭು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.