ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

 ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು,ಜೂ.10, 2023: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‍ಗಳಲ್ಲಿ ಶೇಕಡಾ 60 ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಇಲಾಖೆಯ ವೆಬ್‍ಸೈಟ್ www.sw.kar.nic.in ಆನ್‍ಲೈನ್ ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು ಆಯಾ ತಾಲೂಕುಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!