ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ರೈತರಿಗೆ ಇ-ಕೆವೈಸಿ ಕಡ್ಡಾಯ
ಮಂಗಳೂರು,ಜೂ.13, 2023: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಂದಿನ ಕಂತಿನ ಆರ್ಥಿಕ ನೆರವು ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಜಿಲ್ಲೆಯಲ್ಲಿ ಒಟ್ಟು 1,53,351 ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಇದುವರೆಗೂ 1,16,835 ರೈತರು ಮಾತ್ರ ಇ-ಕೆವೈಸಿ ಮಾಡಿಸಿಕೊಂಡಿರುತ್ತಾರೆ.
ಬಾಕಿ ಇರುವ ರೈತರು ಇ-ಕೆವೈಸಿ ಮಾಡಿಸಬಹುದಾದ ವಿಧಾನ:
ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್‍ನ ಫಾರ್ಮರ್ಸ್ ಕೋರ್ನರ್‍ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಅಥವಾ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ನಾಗರಿಕ ಸೇವಾ ಕೇಂದ್ರ (ಸಿಎಸ್‍ಸಿ)/ ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Recent Post
- Today’s Rubber price (Kottayam and International market)
- Arecanut and Pepper Price at TSS- Sirsi
- Udupi Sri Krishna Alankara
- Udupi Mallige and Jaaji today’s price
- Today’s Rubber price at Rubber Society- Ujire