ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಮಂಗಳೂರು,ಜೂ.14, 2023: 2023-24ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಯಂತ್ರಚಾಲಿತ ದ್ವಿಚಕ್ರವಾಹನ, ಆಧಾರ ಯೋಜನೆ, ಬ್ರೈಲ್ ಕಿಟ್ ಹಾಗೂ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಥವಾ ತಾಲ್ಲೂಕಿನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಅಥವಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ 2023ರ ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತರ ಕಲ್ಯಾಣಾಧಿಕಾರಿಯವರ ಕಚೇರಿಯ ದೂರವಾಣಿ ಸಂಖ್ಯೆ: 0824-2458173/ 2455999 ಅಥವಾ ವೆಬ್ಸೈಟ್ ವಿಳಾಸ: https://dwdsc.karnataka.gov.in/ ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.