ಜೂನ್ 15 ರಂದು ಮೀನುಗಾರಿಕೆ, ಬಂದರು ಸಚಿವರ ಪ್ರವಾಸ
ಮಂಗಳೂರು,ಜೂ.15, 2023: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಜೂನ್ 16ರ ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂ.16ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವಭಾವಿ ಸಭೆ ನಡೆಸುವರು.
ನಂತರ 11.30ಕ್ಕೆ ನಗರದ ಮೀನುಗಾರಿಕಾ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಿ, ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ತೆರಳುವರು ಎಂದು ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.