ಜು.11 ರಂದು ಪಿಂಚಣಿ ಅದಾಲತ್

 ಜು.11 ರಂದು ಪಿಂಚಣಿ ಅದಾಲತ್
Share this post

ಮಂಗಳೂರು,ಜು.03, 2023: ಜು.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪಿಂಚಣಿದಾರರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ಸಂಬಂಧಿಸಿದ ಪಿಂಚಣಿ ಅದಾಲತ್ ನಡೆಯಲಿದೆ.

ಮೂರು ಜಿಲ್ಲೆಗಳಲ್ಲಿ ವಾಸವಿರುವ ಪಿಂಚಣಿದಾರರು ಈ ಅದಾಲತ್‍ನಲ್ಲಿ ಭಾಗವಹಿಸಿ, ತಮ್ಮ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!