ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ ನೀಡಿ ಆದೇಶ

 ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡಕ್ಕೆ ಶೇ.50 ರಿಯಾಯಿತಿ ನೀಡಿ ಆದೇಶ
Share this post

ಮಂಗಳೂರು, ಜು.06, 2023: ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ ಚರ್ಚಿಸಿ, ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ 2023ರ ಫೆ.11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50 ರಷ್ಟ ಮಾತ್ರ ರಿಯಾಯಿತಿ ನೀಡಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಈ ರಿಯಾಯಿತಿಯು 2023ರ ಸೆಪ್ಟೆಂಬರ್ 9 ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಅವಕಾಶದ ಪ್ರಯೋಜನ ಪಡೆದು ಇ- ಸಂಚಾರಿ ಚಲನ್ ಪಡೆದು ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸಂಚಾರರು ತಮ್ಮ ಪ್ರಕರಣ ಮುಕ್ತ್ತಾಯಗೊಳಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!