ಬೆಳೆ ಸ್ಪರ್ಧೆ: ಅರ್ಜಿ ಆಹ್ವಾನ

 ಬೆಳೆ ಸ್ಪರ್ಧೆ: ಅರ್ಜಿ ಆಹ್ವಾನ
Share this post

ಮಂಗಳೂರು,ಜು.18, 2023: ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಮತ್ತು ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಾ ಮಟ್ಟಗಳಿಗೆ ಅನ್ವಯಿಸುವಂತೆ ಸಾಮಾನ್ಯ ರೈತರು 100 ರೂ. ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರು 25 ರೂ.ಗಳ ನೋಂದಣಿ ಶುಲ್ಕ ಪಾವತಿಸಬೇಕು.

ನಿಬಂಧನೆಗಳು:
ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು, ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು, ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ರೈತ ಅಥವಾ ರೈತರ ಕುಟುಂಬದವರು ಮುಂದಿನ ಐದು ವರ್ಷಗಳಲ್ಲಿ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ ಮತ್ತು ಜಿಲ್ಲಾಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯಮಟ್ಟಕ್ಕೆ ಸ್ಪರ್ಧಿಸಬಹುದು. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ, ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸಬೇಕು.

ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ 2023ರ ಆಗಸ್ಟ್ 31ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. 

ಅರ್ಹ ರೈತರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ 2023ರ ಆಗಸ್ಟ್ 31ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!