ಉಡುಪಿ: ಆ. 11 ಮತ್ತು 13 ರಂದು ವಿದ್ಯುತ್ ವ್ಯತ್ಯಯ

 ಉಡುಪಿ: ಆ. 11 ಮತ್ತು 13 ರಂದು ವಿದ್ಯುತ್ ವ್ಯತ್ಯಯ
Share this post

ಉಡುಪಿ, ಆಗಸ್ಟ್ 8, 2023: ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಾಡುಹೊಳೆ, ಗುಡ್ಡೆಯಂಗಡಿ, ಭೂತಗುಂಡಿ, ಭೂತಮಾರು, ಶಿರ್ಲಾಲು, ಹಾಡಿಯಂಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 13 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!