ಸೆ.09 ರಂದು ರಾಷ್ಟ್ರೀಯ ಲೋಕ ಅದಾಲತ್: ಡಿ.ಎಸ್.ವಿಜಯ ಕುಮಾರ
ಕಾರವಾರ, ಆ.08, 2023: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆ.09 ರಂದು ಜಿಲ್ಲೆಯಲ್ಲಿ ಮೂರನೇ ‘ರಾಷ್ಟ್ರೀಯ ಬೃಹತ್ ಲೋಕ್ ಅದಾಲತ್’ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಡಿ.ಎಸ್ ವಿಜಯ ಕುಮಾರ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಆಯೋಜಿಸಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲು ರಾಷ್ಟ್ರೀಯ ಬೃಹತ ಲೋಕ್ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 35467 ಪ್ರಕರಣಗಳು ಬಾಕಿ ಇವೆ. ಕಳೆದಬಾರಿ 4690 ಬಾಕಿ ಇರುವ ಪ್ರಕರಣಗಳು ಹಾಗೂ 19595 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಕಳೆದ ಬಾರಿ ಲೋಕ್ ಅದಾಲತ್ ನಲ್ಲಿ ಒಟ್ಟು 24285 ಪ್ರಕರಣಗಳನ್ನು ಇತ್ಯಾರ್ಥ ಮಾಡಲಾಗಿದೆ ಎಂದು ಅವರು ಹೇಳಿದರು.
ಜೀವ ವಿಮಾ ನಿಗಮದವರು ಹೆಚ್ಚಾಗಿ ಸ್ಪಂದನೆ ನೀಡಬೇಕು. ಚೆಕ್ ಬೋನ್ಸ್ ಪ್ರಕರಣಗಳಲ್ಲಿ ಸಹಕಾರ ಸಂಘದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಸಕ್ರಿಯವಾಗಿ ಪಾಲ್ಗೊಂಡು ರಾಜಿಯಗಳು ಉದರವಾಗಿ ಮುಂದೆ ಬಂದರೆ ಸುಲಭವಾಗಿ ಬಹಳಷ್ಟು ಪ್ರಕರಣಗಳು ಇತ್ಯಾರ್ಥಗೊಳಿಸಲು ಅವಕಾಶವಿದೆ. ಹಾಗೆಯೇ ನ್ಯಾಯಾಲಯಗಳಲ್ಲಿ ಹೆಚ್ಚಿನದಾಗಿ ಪಾರ್ಟಿಗಳು ಬಂದರೆ ಸೌರ್ದಿತವಾಗಿ ರಾಜಿ ಮಾಡಿಕೊಂಡರೆ ಒಳ್ಳೆಯದು ಎಂದು ಅವರು ಹೇಳಿದರು.
ಸಾರ್ವಜನಿಕರು ಸೆ.09 ರಂದು ನಡೆಯಲಿರುವ ಲೋಕ್ ಅದಾಲತ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಕರಣಗಳನ್ನು ಇತ್ಯಾರ್ಥ ಮಾಡಿಕೊಳ್ಳುವುದರ ಮೂಲಕ ಇದರ ಸದುಪಯೋಗ ಪಡೆದುಕೊಳುವಂತೆ ಅವರು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ ಅವರು ಇದ್ದರು.