ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

The Prime Minister, Shri Narendra Modi pays homage to Sri Narayana Guru, at Sivagiri Mutt, Kerala on December 15, 2015.
ಮಂಗಳೂರು.ಆ.29, 2023: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ.31ರ ಗುರುವಾರ ಸಂಜೆ 4 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಸಂಗಪ್ಪ ತಂಗಡಿಗಿ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್‍ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ ಅವರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಸಂದೇಶವನ್ನು ನೀಡುವರು.