ಸೆ.05 ರಂದು ಶಿಕ್ಷಕರ ದಿನಾಚರಣೆ
ಮಂಗಳೂರು, ಸೆ.04, 2023: ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ಉತ್ತರ ವಲಯ, ಬೆಂಗಳೂರಿನ ದಿನಾಚರಣಾ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಶಿಕ್ಷಕರ ದಿನಾಚರಣೆ ಸಮಿತಿಯ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಸೆ.5ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಎಸ್. ಗೌರವ ಉಪಸ್ಥಿತಿ ವಹಿಸುವರು. ವಿಧಾನಸಭಾ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.
ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ಡಾ. ಡಿ. ವಿರೇಂದ್ರ ಹೆಗ್ಗಡೆ, ವಿಧಾನ ಸಭಾ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಉಮಾನಾಥ್ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್ ಭಾಗವಹಿಸುವರು.
ಬೆಳಿಗ್ಗೆ 9.30ರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10.30ಕ್ಕೆ ನಗರದ ಶ್ರೀ ರಾಮಕೃಷ್ಣ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಬಾಲಕೃಷ್ಣ ಶೆಟ್ಟಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.