ಸೆ. 22 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

 ಸೆ. 22 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
Share this post

ಕಾರವಾರ, ಸೆ. 21, 2023: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉತ್ತರ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಸೆ.೨೨ ರಂದು ಬೆಳಗ್ಗೆ 9.30 ಗಂಟೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉಸ್ತುವಾರಿ ಸಚಿವರಾದ ಮಾಂಕಾಳ ಎಸ್. ವೈದ್ಯ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಅನಂತ ಕುಮಾರ ಹೆಗಡೆ, ಶಾಸಕರಾದ ಆರ್. ವಿ. ದೇಶಪಾಂಡೆ, ಅರಬೈಲು ಶಿವರಾಮ ಹೆಬ್ಬಾರ್, ದಿನಕರ ಶೆಟ್ಟಿ, ಸತೀಶ್ ಕೆ. ಸೈಲ್, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರು, ಶಾಂತಾರಾಮ ಬಿ. ಸಿದ್ದಿ, ಗಣಪತಿ ಉಳ್ವೆಕರ, ಮತ್ತಿತರರು ಭಾಗವಹಿಸಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!