ಉಡುಪಿ: ಅ. 28 ರಂದು ಮಹರ್ಷಿ ವಾಲ್ಮೀಕಿ ಜಯಂತಿ

 ಉಡುಪಿ: ಅ. 28 ರಂದು ಮಹರ್ಷಿ ವಾಲ್ಮೀಕಿ ಜಯಂತಿ
Share this post

ಉಡುಪಿ, ಅಕ್ಟೋಬರ್ 17, 2023: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಅಕ್ಟೋಬರ್ 28 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ಹಾಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಲೇಖಕಿ ಡಾ. ರೇಖಾ ವಿ ಬನ್ನಾಡಿ ಉಪನ್ಯಾಸ ನೀಡಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!