ಅಕ್ಟೋಬರ್ 28 ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿ
ಮಂಗಳೂರು,ಅ.24, 2023: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರ ಶನಿವಾರ ಬೆಳಗ್ಗೆ 10.30 ಕ್ಕೆ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.