ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ

 ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ
Share this post

ಮಂಗಳೂರು,ಅ.26, 2023: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ http://shp.karnataka.gov.in ತಂತ್ರಾಂಶದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 15ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ವಿದ್ಯಾರ್ಥಿಗಳು ವಿದ್ಯಾಸಿರಿ ಯೋಜನೆಗೆ ಅರ್ಹರಾಗುತ್ತಾರೆ. ಪ್ರಸಕ್ತ ಸಾಲಿನಲ್ಲಿ ವಿದ್ಯಾಸಿರಿ ಯೋಜನೆಗೆ ಪ್ರತ್ಯೇಕ ಅರ್ಜಿ ಆಹ್ವಾನಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಾಹಿತಿ ಕೇಂದ್ರ ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಮತ್ತು ತಾಲೂಕು ಮಾಹಿತಿ ಕೇಂದ್ರ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಅವರನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!