ಡಾI ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

 ಡಾI ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ
Share this post

ಮಂಗಳೂರು,ಡಿ.07, 2023: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಉಳ್ಳಾಲ ತಾಲೂಕಿನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಅಸೈಗೊಳಿಯಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅವರು ಭೇಟಿ ನೀಡಿದರು.

ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲಿಸಿದ ಅವರು ಸಂವಾದ ನಡೆಸಿ ಅಹವಾಲುಗಳನ್ನು ಆಲಿಸಿದರು. ಸ್ಮಾರ್ಟ್ ಕ್ಲಾಸ್ ಕಲಿಕೆಯನ್ನು ಪರಿಶೀಲಿಸಿ ಬಳಿಕ ಅಡುಗೆ ಕೋಣೆ, ಉಗ್ರಾಣ ಕೊಠಡಿಯನ್ನು ತಪಾಸಣೆ ನಡೆಸಿ ಆಹಾರದ ಗುಣಮಟ್ಟ ಪರಿಶೀಲಿಸಿದರು. ರಾತ್ರಿ ವಿದ್ಯಾರ್ಥಿಗಳೊಂದಿಗೆ ವಸತಿ ಶಾಲೆಯಲ್ಲಿ ಭೋಜನ ಸವಿದರು.

ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್, ಉಳ್ಳಾಲ ತಾಹಶೀಲ್ದಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಜಿನೇಂದ್ರನಾಥ್ ಮತ್ತಿತರರು ಇದ್ದರು.

ನಗರಸಭೆ, ತಾಲೂಕು ಕಚೇರಿ ಭೇಟಿ:  ಇದಕ್ಕೂ ಮೊದಲು ಜಿಲ್ಲಾಧಿಕಾರಿಗಳು ಉಳ್ಳಾಲ ತಾಲೂಕು ಕಚೇರಿ, ನಗರಸಭೆ ಕಚೇರಿಗಳಿಗೆ ಭೇಟಿ ನೀಡಿದರು. ಸಿಬ್ಬಂದಿಗಳೊಂದಿಗೆ ಕಾರ್ಯವೈಖರಿ ಪರಿಶೀಲಿಸಿದ ಅವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಕಚೇರಿ ಪ್ರಗತಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ತ್ವರಿತ ಗತಿಯಲ್ಲಿ ಸೇವೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!