ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ.ಡಿ.18, 2023: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರು ಅಧಿಸೂಚನೆ ಹೊರಡಿಸಿದ್ದು, ಉತ್ತರಕನ್ನಡ ಜಿಲ್ಲೆಯ 5ನೇ ತರಗತಿಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಮುದಾಯದ, ವಿಶೇಷ ವರ್ಗದ, ಸಫಾಯಿ ಕರ್ಮಚಾರಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾಲಕರ ಆಸಕ್ತ ವಿದ್ಯಾರ್ಥಿಗಳು ಡಿ.31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸುವ ಪಾಲಕ/ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಮಾಹಿತಿ ಪುಸ್ತಕ 2024 ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/kreis ರಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.