ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ

 ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ
Share this post

ಮಂಗಳೂರು, ಡಿ.21, 2023: 2023-24 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸಲಾಗಿದೆ.

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP)ಯಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 31-12-2023ರವರೆಗೆ ವಿಸ್ತರಿಸಲಾಗಿದೆ. ಸೇವಾಸಿಂದು https://sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ, ಬೆಂಗಳೂರು- 560052 ಇಲ್ಲಿಗೆ ನಿಗದಿಪಡಿಸಿದ ದಿನಾಂಕದಂದು ಸಲ್ಲಿಸಬೇಕು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ https://dom.karnataka.gov.in/dakshina_kannada/public ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!