ಬಂದೂಕು ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು, ಡಿ.28, 2023: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗಾಗಿ ಬಂದೂಕು ತರಬೇತಿಯನ್ನು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಪಡೆದುಕೊಳ್ಳಲು ಆಸಕ್ತಿಯುಳ್ಳವರು ಉಪ ಪೊಲೀಸ್ ಆಯುಕ್ತರ ಕಚೇರಿ, ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಕಚೇರಿಯಲ್ಲಿ ನಿಗದಿತ ಅರ್ಜಿಯನ್ನು ಪಡೆದು 3 ಪಾಸ್ ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಜನವರಿ 10ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824-2220811, 8105312333 ಸಂಪರ್ಕಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.