ಅಲ್ಪಸಂಖ್ಯಾತರ ಇಲಾಖೆ: ಮದರಸಗಳಿಂದ ಅರ್ಜಿ ಆಹ್ವಾನ
ಮಂಗಳೂರು,ಜ.04, 2024: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದಲ್ಲಿನ ಮದರಸಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಅರ್ಹ ಸಂಸ್ಥೆಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು:
ಮದರಸ ಸಂಸ್ಥೆಗಳು ರಾಜ್ಯದಲ್ಲಿ ವಕ್ಫ್ ನೋಂದಾಯಿತ ಅಥವಾ ಇತರೆ ಸಂಘ ಸಂಸ್ಥೆ ಕಾಯ್ದೆಯಡಿ ನೋಂದಾಯಿತ ಮದರಸ ಸಂಸ್ಥೆ ಆಗಿರಬೇಕು. ಮದರಸದಲ್ಲಿ 40 ಅರ್ಹ ವಿದ್ಯಾರ್ಥಿಗಳಿರಬೇಕು ಮತ್ತು ಮದರಸಗಳು ತರಗತಿ ಕೊಠಡಿಗಳೊಂದಿಗೆ ವಸತಿ ಸೌಲಭ್ಯವನ್ನು ಹೊಂದಿರಬೇಕು. ಜನವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆನ್‍ಲೈನ್ ಲಿಂಕ್: https://forms.gle/xgSo1352bn8KWLAn6 ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.