ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ

 ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ
Share this post

ಮಂಗಳೂರು, ಜ. 10, 2024: ನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಅವರು ಬುಧವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ  ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ಮನಪರಿವರ್ತನೆಗಾಗಿ “ಸಾಂಸ್ಕøತಿಕ ಸೌರಭ” ಕಾರ್ಯಕ್ರಮದಲ್ಲಿ ಮಾತನಾಡಿದರು.  ಜೈಲಿನಲ್ಲಿ ಖೈದಿಗಳೇ ವಿವಿಧ ರೀತಿಯ ಗಿಡ ಮರಗಳನ್ನು ಬೆಳೆಸಿ ಪೋಷಿಸಿಕೊಂಡು ಬಂದಿರುವುದು ಶ್ಲಾಘನೀಯ. ಸಾಕಷ್ಟು ತರಕಾರಿ, ಹಣ್ಣು ಗಿಡ ಮರಗಳು ಕಂಡುಬಂದಿದೆ.  ಈ ನಿಟ್ಟಿನಲ್ಲಿ ಜೈಲು ಅಧಿಕಾರಿಗಳ ಪ್ರೋತ್ಸಾಹ ಮೆಚ್ಚುವಂತದ್ದು. ಇಲ್ಲಿ ನರ್ಸರಿ ಸ್ಥಾಪಿಸಿ, ಮರ ಗಿಡಗಳ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು.ಇದಕ್ಕಾಗಿ ಸೂಕ್ತ ಸ್ಥಳಾವಕಾಶ ನೀಡಲು ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜೈಲಿನಲ್ಲಿರುವ ನಿವಾಸಿಗಳ ಮನಪರಿವರ್ತನೆ ನಿಟ್ಟಿನಲ್ಲಿ ಅವಶ್ಯವಿರುವ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಲು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಖೈದಿಗಳ ಮನಪರಿವರ್ತನೆಗೆ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಿರುವುದು ಶ್ಲಾಘನೀಯವಾಗಿದ ಎಂದರು.

ಸಮಾರಂಭದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಪತ್ರಕರ್ತ ಹರ್ಷ, ಕಾರಾಗೃಹ ಭದ್ರತಾ ಅಧಿಕಾರಿಗಳಾದ ಭರತ್ ನಾಯಕ್, ಸುಭಾಷ್ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ನೃತ್ಯ, ಯಕ್ಷಗಾನ, ಜಾನಪದ ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!