ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣ: ಅರ್ಜಿ ಆಹ್ವಾನ

ಉಡುಪಿ, ಜನವರಿ 21, 2024: ಜಿಲ್ಲಾ ವ್ಯಾಪ್ತಿಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಅರ್ಜಿ, ಆರ್.ಟಿ.ಸಿ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಹತ್ತಿರದ ಮೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ಒಂದು ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.