ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ: ಬೆಂಕಿ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಿ
ಉಡುಪಿ, ಮೇ 09, 2024: ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಹಿನ್ನೆಲೆ, ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈಗಾಗಲೇ ಜಿಲ್ಲಾಡಳಿತದಿಂದ ನಿರ್ದೇಶನಗಳನ್ನು ನೀಡಲಾಗಿರುತ್ತದೆ.
ಈ ಸಮಯದಲ್ಲಿ ಬೆಂಕಿ ಅವಗಡಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಬೆಂಕಿ ಅನಾಹುತ ಸಂಭವಿಸುವ ವಸ್ತುಗಳಾದ ಪೆಟ್ರೋಲ್, ಡೀಸೇಲ್, ಪಟಾಕಿ ಮತ್ತು ಇತರೆ ಸ್ಫೋಟಕ ವಸ್ತುಗಳ ಅಧೀಕೃತ ದಾಸ್ತಾನು ಹೊಂದಿರುವವರು ಮತ್ತು ದಾಸ್ತಾನು ಮಾಡುವ ಸ್ಥಳಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಕೂಡಲೇ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಯಾವುದೇ ಅನಾಹುತಗಳು ಸಂಭವಿಸದಂತೆ ಜಾಗೃತರಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಅಗ್ನಿನಂದಕ ಉಪಕರಣಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು.
ಒಂದು ವೇಳೆ ಬೇಜಾವಬ್ದಾರಿಯಿಂದಾಗಿ ಅನಾಹುತಗಳು ಸಂಭವಿಸಿದಲ್ಲಿ ಸಂಬಂಧಪಟ್ಟವರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.