ಅರೆಕಾಲಿಕ ಕೋರ್ಸ್: ಅರ್ಜಿ ಆಹ್ವಾನ

 ಅರೆಕಾಲಿಕ ಕೋರ್ಸ್: ಅರ್ಜಿ ಆಹ್ವಾನ
Share this post

ಮಂಗಳೂರು,ಮೇ.28, 2024: ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‍ನಲ್ಲಿ ಅರೆಕಾಲಿಕ ಪ್ರಥಮ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ 2024-25ನೇ ಸಾಲಿನ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಂಬಂಧಪಟ್ಟ ವಿಷಯದಲ್ಲಿ ಎರಡು ವರ್ಷಗಳ ತಾಂತ್ರಿಕ ಸೇವಾನುಭಾವ ಪಡೆದು ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳಲ್ಲಿ ಖಾಯಂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆಯನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್: dtek.karnataka.gov.in ಅಥವಾ dtetech.karnataka.gov.in/kartechnical ಗಳಿಂದ ಡೌನ್‍ಲೋಡ್  ಮಾಡಿ ಜೂನ್ 15 ರೊಳಗೆ ಈ ಕಚೇರಿಗೆ ಅರ್ಜಿ ಸಲ್ಲಿಸುವಂತೆ  ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!