ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ

ಮಂಗಳೂರು,ಮೇ.28, 2024: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 8.15 ಗಂಟೆಗೆ ನಗರದ ಮಣ್ಣಗುಡ್ಡೆಯ ಮಂಗಳ ಕ್ರೀಡಾಂಗಣದಿಂದ ಪರಿಸರ ಜಾಥ ಆರಂಭವಾಗಲಿದ್ದು, ಬಳಿಕ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಪರಿಸರ ಪ್ರಶಸ್ತಿ ಸಮಾರಂಭ ನಡೆಯಲಿದೆ ಎಂದು ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.