ಡಿಪ್ಲೋಮಾ ಪ್ರವೇಶ: ಅರ್ಜಿ ಆಹ್ವಾನ

 ಡಿಪ್ಲೋಮಾ ಪ್ರವೇಶ: ಅರ್ಜಿ ಆಹ್ವಾನ
Share this post

ಮಂಗಳೂರು,ಜೂ.25, 2024: ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ನಲ್ಲಿ 2024-25ನೇ ಸಾಲಿನ ಅರೆಕಾಲಿಕ (ಪಾರ್ಟ್ ಟೈಮ್) ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 17ರ ವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಾಂತ್ರಿಕ ಶಿಕ್ಷಣ ಇಲಾಖೆಯ  ವೆಬ್‍ಸೈಟ್ dtek.karnataka.gov.in ಅಥವಾ dtetech.karnataka.gov.in/kartechnical ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!