ಮಂಗಳೂರು: ಡೆಂಗ್ಯೂ ವಾರ್ ರೂಂ ಆರಂಭ


ಮಂಗಳೂರು,ಜು.12, 2024: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಡೆಂಗ್ಯೂ ನಿಯಂತ್ರಣದ ಕುರಿತು ವಾರ್ ರೂಂ ಅನ್ನು ಜುಲೈ 13 ರಿಂದ ಸಕ್ರಿಯಗೊಳಿಸಲಾಗಿದೆ.
ವಾರ್ ರೂಂ ಸಂಖ್ಯೆ 9449843255 ಆಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಡೆಂಗ್ಯೂ ನಿಯಂತ್ರಣದಲ್ಲಿ ಸಹಕರಿಸುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.