ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 13, 2024: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 04 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ: 8050770004, 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.