ಉಳ್ಳಾಲ ನಗರಸಭೆ : ಪ.ಜಾತಿ/ಪ.ಪಂಗಡ ಯೋಜನೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು,ಆ.13, 2024: ಉಳ್ಳಾಲ ನಗರಸಭಾ ವ್ಯಾಪ್ತಿಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ವಿವಿಧ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಮೃತ ನಗರೋತ್ಥಾನ ಯೋಜನೆಯ(ಮುನಿಸಿಪಾಲಿಟಿ) ಹಂತ 4ರ ಅಡಿಯಲ್ಲಿ ಶೇ. 24.10ರ ನಿಧಿಯಡಿ ಬಾಕಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಡಿ ಪಕ್ಕಾ ಮನೆ ನಿರ್ಮಾಣಕ್ಕೆ ಸಹಾಯಧನ, ಮನೆ ದುರಸ್ತಿ ಸಹಾಯಧನ, ಸ್ವ-ಉದ್ಯೋಗ ಮಾಡುವ ಸಣ್ಣ ಉದ್ದಿಮೆಗಾರರಿಗೆ ಸಹಾಯಧನ ಮತ್ತು ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ದಾಖಲೆಗಳು:
ಆಧಾರ್ ಕಾರ್ಡ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, 2023-24ನೇ ಸಾಲಿನ ತೆರಿಗೆ ರಶೀದಿ, ಒಂದು ಭಾವಚಿತ್ರ ಹಾಗೂ ನೀಡುವ ಅರ್ಜಿಗೆ ಅನುಗುಣವಾಗಿ ಸಂಬಂಧಿಸಿದ ದಾಖಲೆಗಳು ಇರಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಉಳ್ಳಾಲ ನಗರಸಭಾ ಕಚೇರಿಯನ್ನು ಸಂಪರ್ಕಿಸುವಂತೆ ಉಳ್ಳಾಲ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.