ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ


ಉಡುಪಿ, ಸೆಪ್ಟೆಂಬರ್ 23, 2024: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬAಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.