ವಿವಿಧ ಸರಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

 ವಿವಿಧ ಸರಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ
Share this post


ಮಂಗಳೂರು,ಜ.20, 2025: ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ  ವಿವಿಧ ಹುದ್ದೆಗಳ ನೇಮಕಾತಿಗೆ  ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಒಂದು ವರ್ಷದ ಅವಧಿಗೆ ದ.ಕ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯ ಡಿ.ಇ.ಐ.ಸಿ ಘಟಕದ ಮಕ್ಕಳ ತಜ್ಞರ ಹುದ್ದೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ Obstetric ICU/HDU ಘಟಕದ ಅರವಳಿಕೆ ತಜ್ಞರ ಹುದ್ದೆ, ಬಂಟ್ವಾಳ ಮತ್ತು ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮೂಡಬಿದ್ರೆ, ಮುಲ್ಕಿ, ವಿಟ್ಲ, ಕಡಬ ಹಾಗೂ ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಹುದ್ದೆ, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಇಲ್ಲಿ ಅರವಳಿಕೆ ತಜ್ಞರ ಹುದ್ದೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಕಡಬ ಮತ್ತು ಕೊಕ್ಕಡ ಇಲ್ಲಿ ಮಕ್ಕಳ ತಜ್ಞರ ಹುದ್ದೆ, ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರ ಇಲ್ಲಿ ಪಿಶಿಷಿಯನ್ ಹುದ್ದೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ಇಲ್ಲಿನ ICU/HDU ಘಟಕದ ವೈದ್ಯಾಧಿಕಾರಿಗಳ ಹುದ್ದೆಗೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಟೆಲಿಮೆಡಿಸಿನ್ ಘಟಕದ ವೈದ್ಯಾಧಿಕಾರಿ ಹುದ್ದೆಗೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ Obstetric ICU/HDU ಘಟಕದ ವೈದ್ಯಾಧಿಕಾರಿಗಳ ಹುದ್ದೆಗೆ, ಎನ್.ಹೆಚ್.ಎಂ-ಎನ್.ವಿ.ಬಿ.ಡಿ.ಸಿಪಿ ಕಾರ್ಯಕ್ರಮದಡಿಯಲ್ಲಿನ Consultant Entomologist (Zonal Level) ಹುದ್ದೆಗೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಮತ್ತು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇಲ್ಲಿಗೆ ಶುಶ್ರೂಷಕಿಯರ ಹುದ್ದೆಗೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸಬಾ ಬೇಂಗ್ರೆ ಇಲ್ಲಿಗೆ ಶುಶ್ರೂಷಕಿ ಹುದ್ದೆಗೆ  ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Pಒ-ಂಃಊIಒ ಕಾರ್ಯಕ್ರಮದಡಿಯಲ್ಲಿ ಮಂಗಳೂರು ದ.ಕ ಜಿಲ್ಲೆಯ ನಮ್ಮ ಕ್ಲಿನಿಕ್,  ಪೋರ್ಟ್ (ಹೊೈಗೆ ಬಜಾರ್)- ಇಲ್ಲಿಗೆ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ ತಿತಿತಿ.ಜಞhಜಿತಿ.iಟಿ ನಲ್ಲಿ ಪಡೆದು ಮಾಹಿತಿಯನ್ನು  ಭರ್ತಿ ಮಾಡಿ ಅರ್ಜಿಯನ್ನು ಮತ್ತು ಅರ್ಜಿಯಲ್ಲಿ ತಿಳಿಸಿರುವ ಅಗತ್ಯ ದಾಖಲೆಗಳನ್ನು ದ.ಕ ಮಂಗಳೂರು ಜಿಲ್ಲಾ ಯೋಜನಾ ನಿರ್ವಹಣಾ ಘಟಕಕ್ಕೆ ಸಲ್ಲಿಸಬೇಕು.  ಅರ್ಜಿ ಸಲ್ಲಿಸಲು ಕೊನೆಯ ದಿನ ಜ.28.

ಹೆಚ್ಚಿನ ಮಾಹಿತಿಗೆ  ಕಛೇರಿಯ ದೂರವಾಣಿ ಸಂ:0824-2424501 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!