ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು: ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in ಅಥವಾ sevasindhuservices. karnataka. gov. in ವೀಕ್ಷಿಸಬಹುದು. ಸಹಾಯವಾಣಿ ಸಂಖ್ಯೆ: 8050370006 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.