ಎಂ.ಎಸ್.ಎಂ.ಇ ಮಾಹಿತಿ ಕಾರ್ಯಾಗಾರ ಡಿಸೆಂಬರ್ 19 ರಂದು
ಮಂಗಳೂರು,ಡಿ.16, 2025: ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸುವುದು (RAMP) ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ಬೆಂಗಳೂರು ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ ಕೈಗಾರಿಕಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ಇಲಾಖಾಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಅರಿವು ಮೂಡಿಸುವ ಸಲುವಾಗಿ KNOW YOUR MSME ECO ಬಗ್ಗೆ ಮಾಹಿತಿ ಕಾರ್ಯಾಗಾರ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಯೆಯ್ಯಾಡಿ ಇಂಡಸ್ಟ್ರೀಯಲ್ ಎಸ್ಟೇಟ್ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.
