ಕೋಟಿ ಕಂಠ ಗಾಯನದಲ್ಲಿ ಉಡುಪಿ ಜಿಲ್ಲೆಯಿಂದ 5 ಲಕ್ಷ ಮಂದಿ ಭಾಗಿ: ಸಚಿವ ಸುನೀಲ್ ಕುಮಾರ್

 ಕೋಟಿ ಕಂಠ ಗಾಯನದಲ್ಲಿ ಉಡುಪಿ ಜಿಲ್ಲೆಯಿಂದ 5 ಲಕ್ಷ ಮಂದಿ ಭಾಗಿ: ಸಚಿವ ಸುನೀಲ್ ಕುಮಾರ್
Share this post

ಉಡುಪಿ, ಅ 16, 2022: ಅ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಎಲ್ಲಾ ಅಗತ್ಯ ಸಿದ್ದತೆ ನಡೆಸಲಾಗುತ್ತಿದ್ದು, ಉಡುಪಿ ಜಿಲ್ಲೆಯಿಂದ 5 ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೆಳಿದರು.

ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ರಾಜ್ಯದ 10000 ಸ್ಥಳದಲ್ಲಿ ಗಾಯನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸಾರ್ವಜನಿಕರು, ಸಂಘ ಸಂಸ್ಥೆಗಳು ಆಕ್ಟೊಬರ್ 20 ರ ಒಳಗೆ ಕಿಖ ಛಿoಜe ಮೂಲಕತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮೊದಲಿಗೆ ನಾಡ ಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಹಾಡಲಾಗುವುದು, ಈ ಹಾಡುಗಳನ್ನು ಹಾಡಲು ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದ ಸಚಿವರು, ರಾಜ್ಯದ 50 ಕಡೆ ಯೂನಿಕ್ ಕಾರ್ಯಕ್ರಮಗಳು ನಡೆಯಲಿದ್ದು , ಉಡುಪಿಯಲ್ಲಿ ಮಣಿಪಾಲದಲ್ಲಿ ಕೆ.ಎಂ.ಸಿ.ಯ 2500 ಮಂದಿ ವ್ಯದ್ಯರು ಮತ್ತು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತಮ್ಮ ಬಿಳಿ ಸಮವಸ್ತçದಲ್ಲಿ ಸ್ಕೇತೋಸ್ಕೋಪ್ ಧರಿಸಿ ಗಾಯನ ಮಾಡಲಿದ್ದು ಹಾಗೂ ಮಲ್ಪೆ ಸಮುದ್ರದಲ್ಲಿ 5 ಬೋಟು ಗಳಲ್ಲಿ ಕಲಾವಿದರು, ಮೀನುಗಾರರು, ಸಾರ್ವಜನಿಕರಿಂದ ಗಾಯನ ಕಾರ್ಯಕ್ರಮ ನಡೆಸಲಾಗುವುದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 5 ಲಕ್ಷ ಜನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳಬೇಕು, ಆಟೋ ಚಾಲಕರು, ಪೌರ ಕಾರ್ಮಿಕರು, ಗೇರು ಬೀಜ ಕಾರ್ಖಾನೆ ಸಿಬ್ಬಂದಿ, ಮೀನುಗಾರರು,ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರಕಾರಿ ನೌಕರರು ಸೇರಿದಂತೆ ಸಾರ್ವಜನಿಕರು ಭಾಗವಹಿಸಬೇಕು ಎಂದರು.

ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಒಂದು ಪ್ರದೇಶದಲ್ಲಿ ಕನಿಷ್ಠ 100

ಮಂದಿ ಸೇರಿ ಹಾಡುಗಳನ್ನು ಹಾಡಬೇಕು , ಜಿಲ್ಲೆಯ ಸಹಕಾರಿ ಸಂಘಗಳು ಮತ್ತು ಅಲ್ಲಿನ ಸಿಬ್ಬಂದಿಗಳು, ಕಾರ್ಖಾನೆಗಳ ಸಿಬ್ಬಂದಿಗಳು,ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಮತ್ತು ನಗರಸ್ಥಳೀಯ ಸಂಸ್ಥೆಗಳಲ್ಲೂ ಸಹ ಎಲ್ಲಾ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಈಗಾಗಲೇ ಈ ಕಾರ್ಯಕ್ರಮಕ್ಕೆ ಹೊರ ರಾಜ್ಯ ಮತ್ತು ಹೊರ ದೇಶದಲ್ಲಿರುವ ಕನ್ನಡಿಗರೂ ಸಹ ಸ್ಪಂದಿಸಿದ್ದು, ತಾವು ನೆಲೆಸಿರುವ ಪ್ರದೇಶದಿಂದಲೇ ಕನ್ನಡ ಗೀತೆಗಳನ್ನು ಹಾಡುವುದಾಗಿ ತಿಳಿಸಿದ್ದು, ಸೇನೆಯಲ್ಲಿರುವ ಕನ್ನಡಿಗ ಯೋಧರೂ ಸಹ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಸಭೆಯಲ್ಲಿ ಭಾಗಹಿಸಿದ್ದ ವಿವಿಧ ಸಂಘಟನೆಗಳು ಮುಖಂಡರು ಈ ಕಾರ್ಯಕ್ರಮಕ್ಕೆ ತಮ್ಮ ಸಂಘದ ಸರ್ವ ಸದಸ್ಯರೊಂದಿಗೆ ಭಾಗವಹಿಸುವುದಾಗಿ ತಿಳಿಸಿದರು.

 ಕೋಟಿಕಂಠ ಗಾಯನ ಕಾರ್ಯಕ್ರಮಕ್ಕೆ ನೊಂದಣಿ ಮಾಡಿಕೊಳ್ಳುವ ಪ್ರತಿಯೊಬ್ಬರಿಗೂ ಆನ್ ಲೈನ್ ಮೂಲಕ ಪ್ರಮಾಣಪತ್ರ ದೊರೆಯಲಿದೆ ಎಂದ ಸಚಿವರು ಕಾರ್ಯಕ್ರಮದಲ್ಲಿ ಯಾವುದೇ ಸಭಾ ಕಾರ್ಯಕ್ರಮ ಆಯೋಜನೆ ಇರುವುದಿಲ್ಲ, ಗಾಯನದ ಕೊನೆಯಲ್ಲಿ ಕನ್ನಡ ನಾಡು ನುಡಿಯ ಕುರಿತು ಸಂಕಲ್ಪ ಸ್ವೀಕರಿಸುವ ಕಾರ್ಯಕ್ರಮ ಮಾಡಬೇಕು ಎಂದರು.

 ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿ.ಪಂ. ಸಿ ಇ ಓ ಪ್ರಸನ್ನ, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!