ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಮಂಗಳೂರು, ಮೇ.27, 2026: 2025-26ನೇ ಸಾಲಿನಲ್ಲಿ 7ನೇ ತರಗತಿ ಮತ್ತು 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ನಿಗಧಿತ ನಮೂನೆಯ ಅರ್ಜಿಗಳನ್ನು ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಶಾಲಾ ಮುಖ್ಯೋಪಾಧ್ಯಾಯರಿಂದ ಧೃಡೀಕರಿಸಿ, ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ, ಸಂಬಂಧಪಟ್ಟ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಕಛೇರಿಗೆ ಜೂನ್ 30 ರೊಳಗೆ ಸಲ್ಲಿಸಬೇಕು.
ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
