ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿ: ಅರ್ಜಿ ಆಹ್ವಾನ

 ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿ: ಅರ್ಜಿ ಆಹ್ವಾನ
Share this post

ಕಾರವಾರ, ಅ. 8, 2026: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಉಚಿತ ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಯು ಅ. 22ರಿಂದ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 9481506564, 9241482541, 9380162042ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ಗಿರಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!