ವಿವಿಧ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

 ವಿವಿಧ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Share this post

ಕಾರವಾರ, ಅ.8, 2026: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ(ನಿ)ದ ವತಿಯಿಂದ 2026-27ನೇ ಸಾಲಿನಡಿ ಅನುಷ್ಠಾಗೊಳಿಸುತ್ತಿರುವ ಯೋಜನೆಗಳಾದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ (ಹೊಸತು ಮತ್ತು ನವೀಕರಣ), ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ (ಹೊಸತು ಮತ್ತು ನವೀಕರಣ), ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಫಾಸ್ಟ್ ಫುಡ್ ಟ್ರಕ್/ಟ್ರೈಲರ್/ಮೊಬೈಲ್ ಅಡುಗೆಮನೆ/ಆಹಾರದ ಮಳಿಗೆ ಯೋಜನೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅ.31 ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಕ್ರಿಶ್ಚಿಯನ್ ಸಮುದಾಯದ ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್ https://kccdclonline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವಾಸೀಂ ಮಂಜಿಲ್, 1ನೇ ಮಹಡಿ, ಹೈಚರ್ಚ ರಸ್ತೆ, ಕಾರವಾರ. ದೂರವಾಣಿ ಸಂಖ್ಯೆ:08382-221180, 8277944219 ಗೆ ಸಂಪರ್ಕಿಸುವAತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!