ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ
ಮಂಗಳೂರು, ಅ.08, 2026: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಕ್ಟೋಬರ್ 9 ರಂದು ರಾತ್ರಿ 8 ಗಂಟೆಗೆ ಪುತ್ತೂರು ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ, ಅಕ್ಟೋಬರ್ 10 ಬೆಳಿಗ್ಗೆ 10 ಪುತ್ತೂರು ಪರ್ಲಡ್ಕ ಡಾ. ಶಿವರಾಮ ಕಾರಂತ ಬಾಲವನದಲ್ಲಿ ಡಾ. ಶಿವರಾಮ ಕಾರಂತರ 125ನೇ ಜನ್ಮದಿನಾಚರಣೆ ಹಾಗೂ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ, ಸಂಜೆ 6 ಗಂಟೆಗೆ ಅಧ್ಯಕ್ಷರು ಬದಿಯಡ್ಕಕ್ಕೆ ತೆರಳಲಿದ್ದಾರೆ.
