ನ.29 ಪಣಂಬೂರು ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ
ಮಂಗಳೂರು,ನ 26, 2020: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿರುವರು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.