ಅಪ್ರೆಂಟಿಸ್ ತರಬೇತಿ-ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

 ಅಪ್ರೆಂಟಿಸ್ ತರಬೇತಿ-ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Share this post

ಉಡುಪಿ, ಡಿ17 2020: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

2020-21 ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಆಯ್ಕೆಯಾದ ಅಪ್ರೆಂಟಿಸ್‌ಗೆ ಮಾಹೆಯಾನ ರೂ. 15,000 ಗಳ ಸ್ಟೈಫಂಡ್ ನೀಡಲಾಗುವುದು.

ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ- ಪ್ರತಿಯಲ್ಲಿ ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನಾಂಕವಾಗಿದೆ.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್ ಕೆರೆ, ಬ್ರಹ್ಮಗಿರಿ, ಉಡುಪಿ ದೂರವಾಣಿ ಸಂಖ್ಯೆ : 0820- 2985242 ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!