ಗ್ರಾ. ಪಂ. ಚುನಾವಣೆ: ಮದ್ಯ ಮಾರಾಟ ನಿಷೇಧ
ಉಡುಪಿ, ಡಿ 17 2020: ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿದೆ.
ಡಿಸೆಂಬರ್ 22 ರಂದು ಉಡುಪಿ, ಹೆಬ್ರಿ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕಿನಲ್ಲಿ ಮೊದಲನೇ ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 27 ರಂದು ಕುಂದಾಪುರ, ಕಾರ್ಕಳ ಹಾಗೂ ಕಾಪು ತಾಲೂಕಿನಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.
ಮೊದಲನೇ ಹಂತದ ಚುವನಾವಣೆಗೆ ಡಿಸೆಂಬರ್ 20 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರ ಸಂಜೆ 5 ಗಂಟೆಯವರೆಗೆ ಹಾಗೂ ಎರಡನೇ ಹಂತದ ಚುವಾವಣೆಗೆ ಡಿಸೆಂಬರ್ 25 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 27 ರ ಸಂಜೆ 5 ರ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ, ಚುನಾವಣೆ ನಡೆಯುವ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.