ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಜ. 16 ರಿಂದ 20 ರವರೆಗೆ
ಮಂಗಳೂರು, ಜನವರಿ 15 2021: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಜನವರಿ 16 ರಂದು ಪುತ್ತೂರು ತಾಲೂಕಿನ ಪಾಣಾಜೆ, ಕೊಯಿ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಜನವರಿ 19 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಮತ್ತು 20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ.
ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.