ಧರ್ಮಸ್ಥಳ: ಭಗವಾನ್ ಬಾಹುಬಲಿ ಮೂರ್ತಿ ಪ್ರತಿಷ್ಠಾ ಮಹೋತ್ಸವ
ಧರ್ಮಸ್ಥಳ, ಫೆ 02, 2021: ಧರ್ಮಸ್ಥಳದ ಭಗವಾನ್ ಶ್ರೀ ಬಾಹುಬಲಿ ಮೂರ್ತಿ ಪ್ರತಿಷ್ಠಾ ಮಹೋತ್ಸವ ಹಾಗೂ ಮೂವತ್ತೊಂಭತ್ತನೆ ವರ್ಧಂತ್ಯುತ್ಸವದ ಅಂಗವಾಗಿ ಮಂಗಳವಾರ ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿಮಂಗಲ ಮೊದಲಾದ ಧಾರ್ಮಿಕ
ವಿಧಿ-ವಿಧಾನಗಳು ನಡೆದವು.
ಶ್ರೀ ನಿರ್ವಾಣ ಸಾಗರ ಕ್ಷುಲ್ಲಕ ಮಹಾರಾಜ್, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ನಾಳೆ ಪಾದಾಭಿಷೇಕ: ಬುಧವಾರ ಬೆಳಿಗ್ಯೆ ಗಂಟೆ 8.30ರಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ.
ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರು ಮಂಗಲ ಪ್ರವಚನ ನೀಡುವರು.