ಫ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ
ಕಾರವಾರ ಫೆ. 15, 2021: ನಗರದ ಕೋಡಿಭಾಗದಲ್ಲಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕೈಗಾ ನಿಲಯದಲ್ಲಿ ಫ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ‘ಸರ್ ಸಿ.ವಿ. ರಾಮಾನ್ ವಿಜ್ಞಾನ ರಸಪ್ರಶ್ನೆ ಸ್ವರ್ಧೆ’ ಥಟ್ ಅಂತ ಹೇಳಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಕ್ಕಳಲ್ಲಿ ವಿಜ್ಞಾನದ ಅಭಿರುಚಿ, ಆಸಕ್ತಿ ಹಾಗೂ ಕುತೂಹಲ ಹೆಚ್ಚಿಸುವ ಆಶಯದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ದೂರದರ್ಶನ ಚಂದನ ವಾಹಿನಿಯ ಸಹಯೋಗದಲ್ಲಿ ಕಳೆದ 6 ವರ್ಷಗಳಿಂದ ರಾಜ್ಯದ ಫ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ‘ಥಟ್ ಅಂತ ಹೇಳಿ’ ಕಾರ್ಯಕ್ರಮದಡಿ ಈ ಸ್ವರ್ಧೆ’ಯನ್ನು ಪ್ರಸಾರ ಮಾಡಲಾಗುತ್ತಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ನೇತ್ರತ್ವದಲ್ಲಿ ಫೆ. 27ರಂದು ಜಿಲ್ಲಾ ಮಟ್ಟದಲ್ಲಿ ರಾಜ್ಯಾಂದ್ಯಂತ ಏಕಕಾಲಕ್ಕೆ ಸ್ಪರ್ಧೆ ನಡೆಸಲಾಗುತ್ತದ್ದು, ಪ್ರತೀ ಶಾಲೆಯಿಂದ 9 ಅಥವಾ 10 ತರಗತಿಯ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಭಾಗವಹಿಸಬಹುದು. ಜಿಲ್ಲಾ ಮಟ್ಟದಲ್ಲಿ ವಿಜೇತರಿಗೆ ಬೆಂಗಳೂರಿನ ದೂರದರ್ಶನ ಕೇಂದ್ರದ ಚಂದನ ವಾಹಿನಿಯಲ್ಲಿ ಅಂತಿಮ ಸ್ಪರ್ಧೆ ನಡೆಸಲಾಗುತ್ತದೆ.
ವಿಜೇತ ವಿದ್ಯಾರ್ಥಿಳಿಗೆ ಪ್ರಥಮ 3 ಸಾವಿರ, ದ್ವಿತೀಯ 2 ಸಾವಿರ ನಗದು ಬಹುಮಾನ ಮತ್ತು ಭಾಗವಹಿಸಿದ ಪ್ರತಿಯೊಬ್ಬರಿಗೂ ಅಭಿನಂದನಾ ಪ್ರಮಾಣ ಪತ್ರ ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಕೇಂದ್ರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರಾವಿಪ ವೆಬ್ಸೈಟ್: : www.krvp.org ಹಾಗೂ ವಾಟ್ಸ್ಪ್ ಸಂಖ್ಯೆ: 9483549159 ಮೂಲಕ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕರಾವಿಪ ಕಛೇರಿ ದೂರವಾಣಿ ಸಂಖ್ಯೆ: 080-26718939, 9483549159ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.