ಸಾಮಾನ್ಯ ಸೇವಾ ಕೇಂದ್ರದಲ್ಲಿ ಶುಲ್ಕವನ್ನು ಪಾವತಿಸಿ ಅರ್ಜಿ
ಮಂಗಳೂರು, ಫೆಬ್ರವರಿ 22, 2021: ಜಿಲ್ಲೆಯಲ್ಲಿ ಮಂಗಳೂರು ಮತ್ತು ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಸ್ವೀಕೃತಗೊಳ್ಳುವ ಸರಕಾರ ಸೇವೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರದಲ್ಲಿ ಸರಕಾರದ ಆದೇಶದಂತೆ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು.
ಇತ್ತೀಚಿನ ದಿನಗಳಲ್ಲಿ ಈ ಸೇವಾ ಕೇಂದ್ರಗಳಲ್ಲಿ ಸೇವೆಗಳಿಗೆ ಹೆಚ್ಚಿನ ಶುಲ್ಕವನ್ನು ಪಡೆಯುವುದರ ಬಗ್ಗೆ ದೂರುಗಳು ಕಂಡು ಬಂದಿದೆ. ಸಾರ್ವಜನಿಕರು ಸರ್ಕಾರ ನಿಗದಿಪಡಿಸಿರುವ ಶುಲ್ಕದಂತೆ ಮೊತ್ತವನ್ನು ಪಾವತಿಸಿ ರಶೀದಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರದವರು ಸಾರ್ವಜನಿಕರಿಂದ ಹೆಚ್ಚಿನ ಶುಲ್ಕವನ್ನು ಪಡೆದುಕೊಂಡಲ್ಲಿ ದೂರನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.