ಪಡಿತರ ಚೀಟಿ: ಇ-ಕೆವೈಸಿ ಕಡ್ಡಾಯ
ಕಾರವಾರ, ಮಾರ್ಚ್ 02, 2021: ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯವು ಪ್ರತಿ ತಿಂಗಳ 1 ರಿಂದ 10 ನೇ ತಾರೀಖಿನ ವರೆಗೆ ಮಾತ್ರ ಆಯಾ ಸ್ಥಳೀಯ ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ.
ಆದ್ದರಿಂದ ಇದುವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಸದಸ್ಯರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಗ್ಯಾಸ್ ಬುಕ್ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮಊರಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು.
ಅಂತ್ಯೋದಯ ಮತ್ತುಆದ್ಯತಾ ಬಿಪಿಎಲ್ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರೂ ಕಡ್ಡಾಯವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕೆಂದು ಕಾರವಾರ ತಹಶೀಲ್ದಾರ್ ಆರ್ ವಿ ಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.