ಸ್ಥಿರ ಸ್ವತ್ತುಗಳ ಮೌಲ್ಯಮಾಪನ: ಆಕ್ಷೇಪಣೆ ಇದ್ದಲ್ಲಿ ತಿಳಿಸಿ
ಮಂಗಳೂರು, ಮಾರ್ಚ್ 03, 2021: ದ.ಕ ಜಿಲ್ಲೆಯ ಉಪನೋಂದಣಾಧಿಕಾರಿ ಕಚೇರಿ, ಮಂಗಳೂರು ತಾಲೂಕು ಕಚೇರಿ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯ ಪ್ರಸ್ತುತ ಸಾಲಿನಲ್ಲಿ ಹೊಸ/ಹಳೆಯ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಪ್ರಕಟಣೆಗೊಳಿಸಲಾಗಿದೆ.
ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದೆಂದು ಮಂಗಳೂರು ತಾಲೂಕಿನ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಉಪ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.